ಅಮೃತಸರ: ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರ ಬೆಂಗಾವಲು ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.

ಪಂಜಾಬ್ನ ಘರಿಂಡಾ ಗ್ರಾಮಕ್ಕೆ ಬುಧವಾರ ಮಧ್ಯಾಹ್ನ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ರಾಜ್ಯಪಾಲರ ವಾಹನದೊಂದಿಗೆ ಸಾಗುತ್ತಿದ್ದ ಬೆಂಗಾವಲು ಪಡೆಯು ಜೀಪ್ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಟೈರ್ ಸ್ಫೋಟಗೊಂಡಿತು. ವಾಹನವನ್ನು ನಿಯಂತ್ರಣಕ್ಕೆ ತರಲು ಚಾಲಕ ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ವಾಹನದಲ್ಲಿದ್ದ ಸಿಬ್ಬಂದಿ ಗಾಯಗೊಂಡಿದ್ದಾರೆ.

‘ತಕ್ಷಣ ಇವರನ್ನು ಗುರುನಾನಕ್ ದೇವ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ರಾಜ್ಯಪಾಲ ಪುರೋಹಿತ್ ಅವರು ಭಾರತ ಮತ್ತು ಪಾಕಿಸ್ತಾನ ಗಡಿ ಭಾಗದ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಗ್ರಾಮ ಸೇನಾ ಸಮಿತಿಯೊಂದಿಗೆ ಸಭೆ ನಡೆಸಲು ತೆರಳಿದ್ದರು’ ಎಂದು ಠಾಣಾಧಿಕಾರಿ ಕರಮ್ಪಾಲ್ ಸಿಂಗ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.