ರಾಮ್ಪುರ (ಉತ್ತರ ಪ್ರದೇಶ): ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್ಐಆರ್ ದಾಖಲಾಗಿದೆ.

ತಮಿಳುನಾಡಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಉದಯನಿಧಿ ಅವರು, ‘ಸನಾತನ ಧರ್ಮ ಎಂಬುದು ಕೊರೊನಾ ಸೋಂಕು, ಡೆಂಗಿ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರಿಯಾಂಕ್ ಖರ್ಗೆ ಕೂಡ ಬೆಂಬಲ ವ್ಯಕ್ತಪಡಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಈ ಇಬ್ಬರು ಚ್ಯುತಿ ತಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಐಪಿಸಿ ಸೆಕ್ಷನ್ 295ಎ (ಧಾರ್ಮಿಕ ನಂಬಿಕೆ, ಭಾವನೆಗೆ ಉದ್ದೇಶಪೂರ್ವಕವಾಗಿ ಧಕ್ಕೆ ತರುವುದು) ಹಾಗೂ 153ಎ (ಧರ್ಮ, ಜಾತಿ, ಜನಾಂಗ, ಹುಟ್ಟಿದ ಸ್ಥಳ, ಭಾಷೆ ಇತ್ಯಾದಿ ಆಧಾರದಲ್ಲಿ ಭಿನ್ನ ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ವರದಿಯಾಗಿರುವ ಸ್ಟಾಲಿನ್ ಅವರ ಹೇಳಿಕೆ ಆಧರಿಸಿ ವಕೀಲರಾದ ಹರ್ಷ ಗುಪ್ತ ಹಾಗೂ ರಾಮ್ ಸಿಂಗ್ ಲೋಧಿ ಎಂಬುವರು ಈ ದೂರು ದಾಖಲಿಸಿದ್ದಾರೆ.

ಸ್ಟಾಲಿನ್ ವಿರುದ್ಧ ಸ್ವಯಂಪ್ರೇರಿತವಾಗಿ ಕಾನೂನು ಕ್ರಮಕ್ಕೆ ಆಗ್ರಹಿಸಿ ನಿವೃತ್ತ ನ್ಯಾಯಮೂರ್ತಿಗಳು ಸೇರಿದಂತೆ 260ಕ್ಕೂ ಹೆಚ್ಚು ಮಂದಿ, ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.