ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸನಾತನ ಧರ್ಮ ಕುರಿತು ಪವನ್ ಕಲ್ಯಾಣ್ ಹೇಳಿಕೆ: ಕಾದು ನೋಡಿ ಎಂದ ಉದಯನಿಧಿ ಸ್ಟಾಲಿನ್

Published : 4 ಅಕ್ಟೋಬರ್ 2024, 10:26 IST
Last Updated : 4 ಅಕ್ಟೋಬರ್ 2024, 10:26 IST
ಫಾಲೋ ಮಾಡಿ
Comments

ಬೆಂಗಳೂರು: ಸನಾತನ ಧರ್ಮ ಕುರಿತಂತೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಮಾಧ್ಯಮದವರು ಪವನ್ ಕಲ್ಯಾಣ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದಾಗ, 'ಕಾದು ನೋಡಿ' ಎಂದಷ್ಟೇ ಉದಯನಿಧಿ ಸ್ಟಾಲಿನ್ ಉತ್ತರಿಸಿದ್ದಾರೆ.

'ಈ ಹಿಂದೆ ಸನಾತನ ಧರ್ಮ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ಬುಡಸಮೇತ ಕಿತ್ತು ಹಾಕಬೇಕು' ಎಂದು ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ಭಾರಿ ವಿವಾದಕ್ಕೀಡಾಗಿತ್ತು.

ತಿರುಪತಿ ಲಾಡು ವಿವಾದದ ಬೆನ್ನಲ್ಲೇ ಸನಾತನ ಧರ್ಮ ರಕ್ಷಣೆಗಾಗಿ ಪವಾನ್ ಕಲ್ಯಾಣ್ 11 ದಿನಗಳ ವ್ರತ ಕೈಗೊಂಡಿದ್ದರು. 'ಸನಾತನ ಧರ್ಮವನ್ನು ನಿರ್ನಾಮ ಮಾಡಲು ಸಾಧ್ಯವಿಲ್ಲ. ಆದರೆ ಅಂತಹ ಹೇಳಿಕೆ ನೀಡಿದ್ದವರನ್ನು ನಿರ್ಮೂಲನೆ ಮಾಡಬೇಕು' ಎಂದು ಪವನ್ ಕಲ್ಯಾಣ್ ಎಚ್ಚರಿಸಿದ್ದರು.

ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಪವನ್ ಕಲ್ಯಾಣ್, ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ದೇಗುಲದಲ್ಲಿ ಆಗಿರುವ ಪಾಪಗಳ ಪ್ರಾಯಶ್ಚಿತ್ತಕ್ಕೆ ವ್ರತ ಕೈಗೊಂಡಿದ್ದರು.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ತಿರುಪತಿ ಲಾಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT