ನವದೆಹಲಿ: ಖಾಲಿಸ್ತಾನ ಪರ ತೀವ್ರಗಾಮಿಗಳನ್ನು ಮಟ್ಟ ಹಾಕಲು 95,000 ಪೌಂಡ್ (ಸುಮಾರು ₹1 ಕೋಟಿ) ಮೀಸಲಿಡಲಾಗಿದೆ ಎಂದು ಬ್ರಿಟನ್ ಭದ್ರತಾ ಸಚಿವ ಟಾಮ್ ಟುಗೆಂಧಟ್ ಘೋಷಿಸಿದ್ದಾರೆ.

ಅವರು ಮೂರು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಿದ್ದು, ಗುರುವಾರ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಈ ಕುರಿತು ತಿಳಿಸಿದರು ಎಂದು ಭಾರತ ಹೈಕಮಿಷನ್ ಕಚೇರಿ ತಿಳಿಸಿದೆ.

ಬ್ರಿಟನ್‌ನಲ್ಲಿ ಖಾಲಿಸ್ತಾನ ಪರ ಹೋರಾಟಗಾರರ ಚಟುವಟಿಕೆಗಳು ಹೆಚ್ಚಾಗಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.

ಭದ್ರತಾ ವಿಚಾರದಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಹಕಾರ ವೃದ್ಧಿ ಮತ್ತು ಜಿ–20 ಭ್ರಷ್ಟಾಚಾರ ವಿರೋಧಿ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಟಾಮ್ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.