ನವದೆಹಲಿ: ಗ್ರೇಟರ್ ನೊಯಿಡಾದ ಶಾಹ್‌ಬೆರಿ ಗ್ರಾಮದಲ್ಲಿ ಎರಡುಕಟ್ಟಡಗಳು ಕುಸಿದು ಬಿದ್ದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟಿದ್ದಾರೆ.

ಮೊದಲಿಗೆ ಆರು ಮಹಡಿಯ ನಿರ್ಮಾಣ ಹಂತದ ಕಟ್ಟಡಕುಸಿದು ಬಿದ್ದಿದೆ. ಇದರಿಂದಾಗಿ ಸನಿಹದಲ್ಲೇ ಇದ್ದ ಮತ್ತೊಂದು ಕಟ್ಟಡಕ್ಕೆ ಹಾನಿಯಾಗಿ ಅದೂ ಸಹ ಕುಸಿದು ಬಿದ್ದಿದೆ.ಮಂಗಳವಾರ ತಡರಾತ್ರಿ ಘಟನೆ ಸಂಭವಿಸಿದೆ.

ಕಟ್ಟಡ ಕುಸಿದು ಬೀಳುವ ವೇಳೆ ಕನಿಷ್ಠ 12 ಕಾರ್ಮಿಕರು ಅದರೊಳಗೆ ಇದ್ದ ಅನುಮಾನ ಇದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡವನ್ನೂ ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಅರುಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

20ರಿಂದ 25 ಜನ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಎನ್‌ಡಿಆರ್‌ಎಫ್ ತಂಡದ ಜತೆ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗುವಂತೆ ಜಿಲ್ಲಾ ಪೊಲೀಸರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಕಾರ್ಯಾಚರಣೆಯನ್ನು ನಿರ್ವಹಿಸುವಂತೆ ಗೌತಮ್ ಬುದ್ಧ ನಗರ ಜಿಲ್ಲಾ ಮ್ಯಾಜಿಸ್ಟ್ರೇಟರಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.