ತಿರುವನಂತಪುರ: ದೇಶದಲ್ಲಿ ನಿರುದ್ಯೋಗ ಹೆಚ್ಚಿದೆ. 2016ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ತೆಗೆದುಕೊಂಡ ನೋಟು ಅಮಾನ್ಯೀಕರಣ ನಿರ್ಧಾರದಿಂದಾಗಿ ಅನೌಪಚಾರಿಕ ವಲಯಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೇರಳದ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಡೆವೆಲಂಪ್ಮೆಂಟ್ ಸ್ಟಡೀಸ್ ‘ಪ್ರತೀಕ್ಷಾ 2030’ ಶೀರ್ಷಿಕೆಯಡಿ ಮಂಗಳವಾರ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ಕೇಂದ್ರ ಸರ್ಕಾರವು ಯೋಜನೆ ಮತ್ತು ಇತರೆ ವಿಷಯಗಳ ಬಗ್ಗೆ ರಾಜ್ಯಗಳೊಂದಿಗೆ ನಿಯಮಿತವಾಗಿ ಸಮಾಲೋಚನೆಯನ್ನು ಕೂಡ ನಡೆಸುವುದಿಲ್ಲ’ ಎಂದು ಟೀಕಿಸಿದರು.

‘ಭಾರತ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್, ತಾತ್ಕಾಲಿಕ ಪರಿಹಾರ ಕ್ರಮಗಳ ಮೂಲಕ ಸಣ್ಣ ಮತ್ತು ಮಧ್ಯಮ ವಲಯಗಳಲ್ಲಿ ಎದುರಾಗಿರುವ ಸಾಲದ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ. ಕೇರಳ ಮತ್ತು ಇತರೆ ರಾಜ್ಯಗಳು ಅತಿಯಾದ ಸಾಲದ ಹೊರೆಗೆ ಸಿಲುಕಿವೆ. ಇದರಿಂದಾಗಿ ಸಾರ್ವಜನಿಕ ಹಣಕಾಸು ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಅಲ್ಲದೆ ಇದು ಮುಂದಿನ ಬಜೆಟ್ನಲ್ಲಿ ದೊಡ್ಡ ಹೊರೆಯನ್ನು ಸೃಷ್ಟಿಸುತ್ತದೆ’ ಎಂದು ಅವರು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.