ನವದೆಹಲಿ: ನಿರುದ್ಯೋಗ ಮತ್ತು ಬೆಲೆ ಏರಿಕೆಯು ದೇಶದ ಜನರು ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆಗಳು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಅಭಿಪ್ರಾಯಪಟ್ಟರು.

ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಒಕ್ಕೂಟವು ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡರು ಎಎಪಿಗೆ ಮತ ಹಾಕುತ್ತಿದ್ದಾರಲ್ಲ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,‘ಭಿನ್ನಾಭಿಪ್ರಾಯಗಳನ್ನು ಬದಿಗಿಡಿ, ನಾವು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕಾಗಿ ಮತದಾನ ಮಾಡಿದ್ದೇವೆ. ಅದರಲ್ಲಿ ಹೆಮ್ಮೆ ಇದೆ’ ಎಂದರು.

‘ಬಿಜೆಪಿ ಮುಖಂಡರು ಎಲ್ಲಾ ವಿಚಾರಗಳ ಬಗ್ಗೆಯೂ ಮಾತನಾಡುತ್ತಿದ್ದಾರೆ. ಆದರೆ ನಿರುದ್ಯೋಗ, ಬೆಲೆ ಏರಿಕೆಯಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ತುಟಿಬಿಚ್ಚುತ್ತಿಲ್ಲ. ಇದರಿಂದ ಜನರು ಬೇಸತ್ತಿದ್ದಾರೆ’ ಎಂದು ಹೇಳಿದರು.

ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ, ಪುತ್ರಿ ಮಿರಾಯ ವಾದ್ರಾ ಮತ್ತು ಪುತ್ರ ರೈಹಾನ್ ವಾದ್ರಾ ಅವರೂ ಮತ ಚಲಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.