ವಾಷಿಂಗ್ಟನ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಅವರು ಜನವರಿ 22 ರಿಂದ 26 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ. ಈ ಸಮಯದಲ್ಲಿ ಅವರು ಜೈಪುರ ಮತ್ತು ಮುಂಬೈಗೂ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಮ್ಮ ಐದು ದಿನಗಳ ಪ್ರವಾಸದಲ್ಲಿ ಭೌಗೋಳಿಕ ರಾಜಕೀಯ ಒತ್ತಡಗಳು, ವಿಶ್ವಸಂಸ್ಥೆಗೆ ಭಾರತದ ಕೊಡುಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಭಾರತದೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ ಸುಸ್ಥಿರತೆ, ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

2024ರ ಏಪ್ರಿಲ್ 15-19ರವರೆಗೆ ನ್ಯೂಯಾರ್ಕ್ನಲ್ಲಿ ನಡೆಯಲಿರುವ ಸಾಮಾನ್ಯ ಸಭೆಗೂ ಇದೇ ವೇಳೆ ಭಾರತಕ್ಕೆ ಆಹ್ವಾನ ನೀಡಲಿದ್ದಾರೆ ಎಂದು ಫ್ರಾನ್ಸಿನ್ ಅವರ ಕಚೇರಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.