ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ 5 ಗಂಟೆಗೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನ ಉಭಯ ಸದನಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾರಿ ಜಟಾಪಟಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಬಿಗಿಪಟ್ಟು ಹಿಡಿದಿರುವ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.

ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಮಂಗಳವಾರದಿಂದ ಚರ್ಚೆ ಆರಂಭವಾಗಿದ್ದು, ಮಣಿಪುರ ಹಿಂಸಾಚಾರ ವಿಷಯಕ್ಕೆ ಸಂಬಂಧಿಸಿ ಕಾವೇರಿತು.

ಮಣಿಪುರದಲ್ಲಿ ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರವು ಸಂವೇದನಾ ರಹಿತವಾಗಿ ವರ್ತಿಸುತ್ತಿದೆ ಎಂದು ಪ್ರತಿಪಕ್ಷಗಳ ಸದಸ್ಯರು ಚಾಟಿ ಬೀಸಿದ್ದಾರೆ. ಅದರಲ್ಲೂ ವಿವಿಧ ಪಕ್ಷಗಳ ಸಂಸದೆಯರು ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಸತ್ನ ಮುಂಗಾರು ಅಧಿವೇಶನ ಶುರುವಾದ ದಿನದಿಂದಲೂ ಮಣಿಪುರ ವಿಷಯವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು. ಸದನದಲ್ಲಿಯೇ ಮೋದಿ ಅವರಿಂದ ಹೇಳಿಕೆ ಪಡೆಯಬೇಕೆಂದು ಬಿಗಿ ನಿಲುವು ತಳೆದಿರುವ ‘ಇಂಡಿಯಾ’ ಹೆಣೆದಿರುವ ತಂತ್ರಗಾರಿಕೆಯ ಭಾಗವಾಗಿ ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ, ಕೇಂದ್ರ ಹಾಗೂ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ವಿರುದ್ಧ ಸಂಸದರು ಮುಗಿಬಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.