ಭುವನೇಶ್ವರ: ಡೆಂಗಿ ಜ್ವರದಿಂದ ಬಳಲುತ್ತಿದ್ದ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿಂಗಿಯಾ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
.ಜೈಪುರ | ಹಲವು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್, ತೀವ್ರ ತಪಾಸಣೆ.ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪೂರ್ವ ಮೈತ್ರಿ ಇಲ್ಲ: ಬಿಜೆಪಿ.
ಜುಯಲ್ ಓರಮ್ ಅವರೂ ಸಹ ಡೆಂಗಿ ಜ್ವರದಿಂದ ಬಳಲುತ್ತಿದ್ದು, ಇದೇ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್, ಆರೋಗ್ಯ ಸಚಿವ ಮುಖೇಶ್ ಮಹಾಲಿಂಗ್, ಸ್ಪೀಕರ್ ಸುರಮಾ ಪಾಧಿ ಸೇರಿದಂತೆ ಬಿಜೆಪಿ ನಾಯಕರು ಜಿಂಗಿಯಾ ಓರಮ್‌ಗೆ ಅಂತಿಮ ನಮನ ಸಲ್ಲಿಸಿದರು.

‘ಜಿಂಗಿಯಾ ಅವರು ಧರ್ಮನಿಷ್ಠೆ, ಮೃದು ಸ್ವಭಾವದ ವ್ಯಕ್ತಿಯಾಗಿದ್ದರು. ಸಾಮಾಜಿಕ ಮತ್ತು ದತ್ತಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜುಯಲ್ ಅವರ ಸುದೀರ್ಘ ರಾಜಕೀಯ ಪಯಣದಲ್ಲಿ ಜಿಂಗಿಯಾ ಓರಮ್ ಅವರು ಪ್ರಮುಖ ಪಾತ್ರ ವಹಿಸಿದ್ದರು‘ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ತಿಳಿಸಿದ್ದಾರೆ.
.ಉತ್ತರ ಪ್ರದೇಶ | ಬಸ್ಗೆ ವ್ಯಾನ್ ಡಿಕ್ಕಿ: 10 ಮಂದಿ ಸಾವು, 27 ಜನರಿಗೆ ಗಾಯ.Muda Scam | ರಾಜ್ಯಪಾಲರ ನಡೆ ವಿರುದ್ಧ ರಾಜ್ಯದಾದ್ಯಂತ ನಾಳೆ ಪ್ರತಿಭಟನೆ: ಡಿಕೆಶಿ.
ಜಿಂಗಿಯಾ ಅವರ ಅಂತ್ಯಕ್ರಿಯೆಯು ಸುಂದರ್‌ಗಢ್ ಜಿಲ್ಲೆಯ ಅವರ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿಂಗಿಯಾ ಓರಮ್ (58) ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

ಜುಯಲ್ ಓರಮ್ ಅವರು 1987ರ ಮಾರ್ಚ್ 8 ರಂದು ಜಿಂಗಿಯಾ ಅವರನ್ನು ವಿವಾಹವಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.