ತ್ರಿಶೂರ್(ಕೇರಳ): ಇದೇ ವರ್ಷ ಏಪ್ರಿಲ್ನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವ ನಡೆಯುವ ಸ್ಥಳಕ್ಕೆ ತೆರಳಲು ಆ್ಯಂಬುಲೆನ್ಸ್ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ಮತ್ತು ಇನ್ನಿಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪ್ರಕರಣ ಸಂಬಂಧ ಸುರೇಶ್ ಗೋಪಿ, ಅಭಿಜಿತ್ ನಾಯರ್ ಮತ್ತು ಆ್ಯಂಬುಲೆನ್ಸ್ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279, 34 ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 179, 184, 188 ಮತ್ತು 192ರಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತ್ರಿಶೂರ್ ಪೂರ್ವ ಪೊಲೀಸರು ತಿಳಿಸಿದ್ದಾರೆ.

‘ಪೂರಂ ಉತ್ಸವಕ್ಕೆ ತೆರಳಲು ಸುರೇಶ್ ಗೋಪಿ ಅವರು ಆಂಬ್ಯುಲೆನ್ಸ್ ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿ ಸಿಪಿಐ ಸ್ಥಳೀಯ ನಾಯಕ ಕೆ.ಪಿ. ಸುಮೇಶ್ ಅವರು ದೂರು ದಾಖಲಿಸಿದ್ದರು.

‘ಗೋಪಿ ಅವರು ಸೇವಾ ಭಾರತಿ ಆಂಬುಲೆನ್ಸ್ ಮೂಲಕ ಪೂರಂ ಮೈದಾನಕ್ಕೆ ಬಂದಿದ್ದರು. ಈ ಮೂಲಕ ಅವರು ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಮೀಸಲಿರುವ ವಾಹನವನ್ನು ವೈದ್ಯಕೀಯೇತರ ಉದ್ದೇಶಗಳಿಗೆ ಬಳಸಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಆರೋಪವನ್ನು ತಳ್ಳಿ ಹಾಕಿದ್ದ ಸುರೇಶ್ ಗೋಪಿ, 'ಉತ್ಸವ ನಡೆಯುವ ಮೈದಾನದವರೆಗೆ ತಮ್ಮ ಕಾರಿನಲ್ಲೇ ಬಂದಿದ್ದೆ. ಈ ವೇಳೆ ಗೂಂಡಾಗಳು ತಮ್ಮ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಲ್ಲಿದ್ದ ಯುವಕರು ತಮ್ಮನ್ನು ಆಂಬುಲೆನ್ಸ್ನಲ್ಲಿ ಕರೆದೊಯ್ದರು' ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.