ನವದಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗುವ ಉದ್ದೇಶದಿಂದ ಕೇಂದ್ರದ ಕೆಲವು ಸಚಿವರು ಉಕ್ರೇನ್ ನೆರೆ ರಾಷ್ಟ್ರಗಳಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಕೇಂದ್ರ ಸಚಿವರಾದ ಹರದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು, ವಿ.ಕೆ. ಸಿಂಗ್ ಅವರು ವಿದ್ಯಾರ್ಥಿಗಳಿಗೆ ನೆರವಾಗಲು ಉಕ್ರೇನ್ ನೆರೆ ದೇಶಗಳಿಗೆ ತೆರಳಲಿದ್ದಾರೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:ಉಕ್ರೇನ್‌ನಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗಲು ಟ್ವಿಟರ್ ಹ್ಯಾಂಡಲ್

ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತಮಟ್ಟದ ಸಭೆ ಕರೆದಿದ್ದಾರೆ. ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗಲು ಕೇಂದ್ರದ ಕೆಲವು ಸಚಿವರು ಉಕ್ರೇನ್ ನೆರೆ ದೇಶಗಳಿಗೆ ತೆರಳುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಕೂಡ ವರದಿ ಮಾಡಿದೆ.

ಇದನ್ನೂ ಓದಿ:ಕಣ್ಣೆದುರೇ ಸಾವಿನ ಭೀಕರತೆ ಕಂಡೆ: ಉಕ್ರೇನ್‌ನಿಂದ ರಾಜ್ಯದ ವಿದ್ಯಾರ್ಥಿನಿ ಭಯದ ಮಾತು

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ನೆರೆ ದೇಶಗಳಾದ ಪೋಲೆಂಡ್, ರೊಮೇನಿಯಾ, ಹಂಗೇರಿ, ಸ್ಲೊವಾಕಿಯಾ ಮೂಲಕ ಸ್ವದೇಶಕ್ಕೆ ಕರೆಸಿಕೊಳ್ಳಲಾಗುತ್ತಿದೆ. ‘ಆಪರೇಷನ್ ಗಂಗಾ’ ಎಂಬ ಹೆಸರಿನ ಕಾರ್ಯಾಚರಣೆ ಮೂಲಕ ಉಕ್ರೇನ್‌ನಿಂದ ಭಾರತೀಯರ ಸ್ಥಳಾಂತರ ನಡೆಯುತ್ತಿದೆ. ಈ ದೇಶಗಳ ಗಡಿಗಳಲ್ಲಿ ಉಕ್ರೇನ್‌ನಿಂದ ಬರುವ ಭಾರತೀಯರಿಗೆ ನೆರವಾಗಲೆಂದೇ ಕೇಂದ್ರಗಳನ್ನು ತೆರೆಯಲಾಗಿದ್ದು, ಇವು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

ಇದನ್ನೂ ಓದಿ:ಒಂದು ದಿನ ಬ್ರೆಡ್ ಮಾತ್ರ ತಿಂದು ಬದುಕಿದ್ದೇವೆ ಅಮ್ಮಾ- ಮುಂಡರಗಿ ವಿದ್ಯಾರ್ಥಿನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.