ನವದೆಹಲಿ: ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಹೊಸದಾಗಿ ಸಂಪುಟ ಸೇರುವ ನಿರೀಕ್ಷೆಯಲ್ಲಿರುವ ಜ್ಯೋತಿರಾದಿತ್ಯ ಸಿಂಧಿಯಾ, ನಾರಾಯಣ ರಾಣೆ ಸೇರಿದಂತೆ 24 ಮಂದಿ ಬೆಳಿಗ್ಗೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಚಿಕ್ಕಮಗಳೂರು–ಉಡುಪಿ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೂ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ. ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ ಅವರು ಮೋದಿಯನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಹಣಕಾಸು ಖಾತೆ ರಾಜ್ಯ ಸಚಿವರಾಗಿರುವ ಅನುರಾಗ್ ಠಾಕೂರ್ ಸೇರಿದಂತೆ ಮೂವರಿಗೆ ಸಂಪುಟ ದರ್ಜೆಗೆ ಬಡ್ತಿ ನೀಡಲಾಗುತ್ತದೆ. ಶೋಭಾ ಕರಂದ್ಲಾಜೆ, ಮೀನಾಕ್ಷಿ ಲೇಖಿ, ಅನುಪ್ರಿಯಾ ಪಟೇಲ್ ಸೇರಿದಂತೆ ಐವರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಂಪುಟ ಪುನರ್ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ರಾಜೀನಾಮೆ ನೀಡಿದ್ದಾರೆ. ಇನ್ನೂ 3–4 ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎಂದು ಎನ್ಡಿಟಿವಿ ವರದಿ ಮಾಡಿದೆ

ಇದನ್ನೂ ಓದಿ:ಕೇಂದ್ರ ಸಂಪುಟ, ಸಿಸಿಇಎ ಸಭೆ ರದ್ದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.