ವಾರಾಣಸಿ (ಉತ್ತರ ಪ್ರದೇಶ): ದೇಶವನ್ನು ಒಗ್ಗೂಡಿಸುವುದು ನಿಜವಾದ ದೇಶಭಕ್ತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಉತ್ತರ ಪ್ರದೇಶದಲ್ಲಿ ಇಂದು (ಶನಿವಾರ) ಭಾರತ ಜೋಡೊ ನ್ಯಾಯ ಯಾತ್ರೆಯ ಎರಡನೇ ದಿನದಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪಕ್ಷದ ರಾಜ್ಯಾಧ್ಯಕ್ಷ ಅಜಯ್ ರೈ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ತೆರೆದ ಜೀಪಿನಲ್ಲಿ ಗೊಡೌಲಿಯಾ ಪ್ರದೇಶದಲ್ಲಿ ಪ್ರವಾಸ ಮಾಡಿದರು. ಬಳಿಕ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.

ನಂತರ ಗೊಡೌಲಿಯಾದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತವು ಪ್ರೀತಿಯ ದೇಶ. ದ್ವೇಷದ ದೇಶವಲ್ಲ. ಸಹೋದರರ ನಡುವಿನ ಸಂಘರ್ಷದಿಂದ ದೇಶ ದುರ್ಬಲವಾಗುತ್ತದೆ. ದೇಶವನ್ನು ಒಗ್ಗೂಡಿಸುವುದೇ ನಿಜವಾದ ದೇಶಭಕ್ತಿ ಎಂದರು.
.ಬಿಹಾರದಲ್ಲಿ ಇಂದು 'ಭಾರತ ಜೋಡೊ ನ್ಯಾಯ ಯಾತ್ರೆ' ಮುಂದುವರಿಸಲಿರುವ ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.