ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಮೇಲಿನ ಆರೋಪ ಸಾಬೀತಾಗಿದೆ.

ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯ 17 ವರ್ಷದ ಯುವತಿ ಮೇಲೆ ಉಚ್ಚಾಟಿತ ಬಿಜೆಪಿ ಶಾಸಕ ಸೇರಿದಂತೆ ಹಲವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ಕುಲದೀಪ್ ಸಿಂಗ್ ಅವರನ್ನು ದೋಷಿಎಂದುಪರಿಗಣಿಸಿ ತೀರ್ಪು ನೀಡಿದೆ.

ಕುಲದೀಪ್ ಸಿಂಗ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀಸ್ ಹಜಾರಿ ನ್ಯಾಯಾಲಯ ಡಿಸೆಂಬರ್ 19 ರಂದು ಶಿಕ್ಷೆಯ ಪ್ರಮಾಣ ಘೋಷಿಸಲಿದೆ.

2017 ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರವಾಗ್ವಾದಗಳಿಗೆ ಕಾರಣವಾಗಿತ್ತು. ಪೊಲೀಸರು, ಅಧಿಕಾರಿಗಳು ತನ್ನ ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದ ಸಂತ್ರಸ್ತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಆರೋಪ ಎದುರಿಸುತ್ತಿದ್ದ ಕುಲದೀಪ್ ಸಿಂಗ್ ಮತ್ತು ಅವರ ಬೆಂಬಲಿಗರು ಸಂತ್ರಸ್ತೆಯ ತಂದೆಯ ಮೇಲೆ ತೀವ್ರ ಹಲ್ಲೆ ನಡೆಸಿದ್ದರು. ಈ ಪ್ರಕರಣದ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.