ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸದೆ ಲೋಪ ಎಸಗಿರುವ ನಾಲ್ವರು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಬಿಐ ಶಿಫಾರಸು ಮಾಡಿದೆ

ಈ ಸಂಬಂಧ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಬಿಐ ಆಗಸ್ಟ್‌ನಲ್ಲಿ ಪತ್ರ ಬರೆದಿದೆ. ಈ ಪತ್ರದಲ್ಲಿಉನ್ನಾವ್ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಐಎಎಸ್ ಅಧಿಕಾರಿ ಅದಿತಿ ಸಿಂಗ್, ಐಪಿಎಸ್ ಅಧಿಕಾರಿ ಪುಷ್ಪಾಂಜಲಿ ದೇವಿ, ನೇಹಾ ಪಾಂಡೆ, ಅಷ್ಟಭುಜ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ.

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಸರಿಯಾದ ರೀತಿಯನ್ನು ತನಿಖೆ ನಡೆಸದ ಕಾರಣ ಈ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ.

2017ರಲ್ಲಿ ಉತ್ತರಪ್ರದೇಶದ ಉನ್ನಾವ್‌ನ ಮಖಿ ಗ್ರಾಮದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಕುಲ್‌ದೀಪ್ ಸಿಂಗ್ ಸೆಂಗರ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.