ನವದೆಹಲಿ: ದೂರದೃಷ್ಟಿ ಇಲ್ಲದೇ, ಯೋಜನಾ ರಹಿತವಾಗಿ ಕಳೆದ ವರ್ಷ ಸರ್ಕಾರ ದೇಶವ್ಯಾಪಿ ಮಾಡಿದ ಲಾಕ್ಡೌನ್ನಿಂದಾಗಿ ಇನ್ನೂ ಲಕ್ಷಾಂತರ ಕುಟುಂಬಗಳು ಸಂಕಟ ಅನುಭವಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸರ್ಕಾರ ಕಳೆದ ವರ್ಷ ಮಾ.24 ರಂದು ರಾಷ್ಟ್ರವ್ಯಾಪಿ ಲಾಕ್ಡೌನ್ ಘೋಷಣೆ ಮಾಡಿತು. ಸರ್ಕಾರದ ಯೋಜಿತವಲ್ಲದ ಈ ಕ್ರಮದಿಂದಾಗಿ ಬಡವರು ಮತ್ತು ವಲಸೆ ಕಾರ್ಮಿಕರು ತೀವ್ರ ತೊಂದರೆ ಅನುಭವಿಸಿದರು‘ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಕೇಂದ್ರ ಸರ್ಕಾರದ ಅಸಮರ್ಥತೆ ಮತ್ತು ದೂರದೃಷ್ಟಿಯ ಕೊರತೆಯಿಂದಾಗಿ ಲಕ್ಷಾಂತರ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿದ್ದು, ಅವರೆಲ್ಲರ ಬಗ್ಗೆ ನನಗೆ ಸಹಾನುಭೂತಿ ಇದೆ‘ ಎಂದು ಹೇಳಿದ್ದಾರೆ.

ಕೋವಿಡ್ 19 ಕಾರಣದಿಂದಾಗಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಪೈಕಿ ಭಾರತದಲ್ಲಿ ಮಕ್ಕಳು ಮತ್ತು ತಾಯಂದಿರ ಮರಣ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಯುನಿಸೆಫ್ನ ಮಾಧ್ಯಮ ವರದಿಯ ತುಣುಕನ್ನು ರಾಹುಲ್ ಗಾಂಧಿ ತಮ್ಮ ಪೋಸ್ಟ್ನೊಂದಿಗೆ ಸೇರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.