ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ | ಬಸ್‌–ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಂಭೀರ ಗಾಯ

Published : 6 ಅಕ್ಟೋಬರ್ 2024, 7:44 IST
Last Updated : 6 ಅಕ್ಟೋಬರ್ 2024, 7:44 IST
ಫಾಲೋ ಮಾಡಿ
Comments

ಶಹಜಹಾನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಪ್ರವಾಸಿ ಬಸ್‌ ಮತ್ತು ಕಂಟೇನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನೇಪಾಳದ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಹಜಹಾನ್‌ಪುರದ ಕುತಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಪ್ರವಾಸಿಗರನ್ನು ರಾಷ್ಟ್ರ ರಾಜಧಾನಿ ದೆಹಲಿಯಿಂದ ನೇಪಾಳಕ್ಕೆ ಬಸ್‌ ಕರೆದೊಯ್ಯುತಿತ್ತು ಎಂದು ಪೊಲೀಸ್‌ ವರಿಷ್ಠಾಧಿಕಾರಿ ರಾಜೇಶ್‌ ಎಸ್‌ ತಿಳಿಸಿದ್ದಾರೆ.

ಬಸ್‌ಗೆ ಮುಂಭಾಗದಿಂದ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಏಳು ಮಂದಿ ಪುರುಷರು ಮತ್ತು ನೇಪಾಳ ಮೂಲದ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT