ಲಖನೌ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡುವ ಹೊಣೆ ಹೊತ್ತಿದ್ದ ಜೈಷ್– ಎ– ಮೊಹಮ್ಮದ್ (ಜೆಇಎಂ) ಸಂಘಟನೆಯ ಉಗ್ರಗಾಮಿಯೊಬ್ಬನನ್ನು ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಶುಕ್ರವಾರ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಹರನ್ಪುರ ಜಿಲ್ಲೆಯ ಕುಂದಾಕಲಾ ಗ್ರಾಮದ ಮೊಹಮ್ಮದ್ ನದೀಮ್ (25) ಎಂದು ಗುರುತಿಸಲಾಗಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನದೀಮ್ನ ಮೊಬೈಲ್ ಫೋನ್ನಿಂದ ಸಂದೇಶಗಳು ಮತ್ತು ಧ್ವನಿಮುದ್ರಿತ ಸಂದೇಶಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಎಲ್ಲಾ ಸಂದೇಶಗಳು ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಿಂದ ಬಂದಿವೆ ಎಂದು ಪತ್ತೆ ಹಚ್ಚಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಬಂಧಿತನಿಂದ ಎರಡು ಮೊಬೈಲ್ ಸಿಮ್ ಕಾರ್ಡ್ಗಳು ಹಾಗೂ ವಿವಿಧ ರೀತಿಯ ಬಾಂಬ್ಗಳನ್ನು ತಯಾರಿಸುವ ಕುರಿತು ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ನದೀಮ್ 2018ರಿಂದ ಜೆಇಎಂ ಜತೆಗೆ ನೇರ ಸಂಪರ್ಕದಲ್ಲಿದ್ದು, ಆತನನ್ನು ವಿಶೇಷ ತರಬೇತಿಗಾಗಿ ಪಾಕಿಸ್ತಾನ ಮತ್ತು ಸಿರಿಯಾಕ್ಕೆ ಆಹ್ವಾನಿಸಲಾಗಿತ್ತು. ವೀಸಾಕ್ಕಾಗಿ ಕಾಯುತ್ತಿದ್ದುದಾಗಿ ಪೊಲೀಸರ ವಿಚಾರಣೆಯಲ್ಲಿ ತಿಳಿಸಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.