ಬಾರಾಬಂಕಿ (ಉತ್ತರ ಪ್ರದೇಶ): ಬಾರಾಬಂಕಿ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿಹಾಡುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಂಸದರ ಆಪ್ತ ಕಾರ್ಯದರ್ಶಿ ದಿನೇಶ್ ಚಂದ್ರ ರಾವತ್ ಅವರ ದೂರಿನ ಮೇರೆಗೆ ಅಪರಿಚಿತ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಆದಿತ್ಯ ತ್ರಿಪಾಠಿ ತಿಳಿಸಿದ್ದಾರೆ.

ಮುಂಬಲಿರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಉಪೇಂದ್ರ ಸಿಂಗ್ ರಾವತ್ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಸಂಸದರ ವರ್ಚಸ್ಸನ್ನು ಹಾಳು ಮಾಡಲು ಕೆಲವರು ಅವರ ಆಕ್ಷೇಪಾರ್ಹ ವಿಡಿಯೊವನ್ನು ಹರಿಬಿಟ್ಟಿದ್ದಾರೆ ಎಂದು ಎಫ್ಐಆರ್ನಲ್ಲಿ ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಪುರುಷನೊಬ್ಬ ಮಹಿಳೆಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವಿಡಿಯೊದಲ್ಲಿರುವ ವ್ಯಕ್ತಿ ಉಪೇಂದ್ರ ಸಿಂಗ್ ರಾವತ್ ಎಂದು ಹೇಳಲಾಗುತ್ತಿದೆ.

'ನಾನು ಬಾರಾಬಂಕಿಯಿಂದ ಪಕ್ಷದ ಟಿಕೆಟ್ ಪಡೆದ ತಕ್ಷಣ, ನನ್ನ ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂದು ರಾವತ್ ಆರೋಪಿಸಿದ್ದಾರೆ. ಅಲ್ಲದೇ ಇದು ಸಂಪೂರ್ಣವಾಗಿ ತಿರುಚಿದ ವಿಡಿಯೊ' ಎಂದು ಅವರು ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿಯು ಆಗಿನ ಹಾಲಿ ಸಂಸದ ಪ್ರಿಯಾಂಕಾ ಸಿಂಗ್ ರಾವತ್ಗೆ ಟಿಕೆಟ್ ನಿರಾಕರಿಸಿ ಉಪೇಂದ್ರ ಸಿಂಗ್ ರಾವತ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು.
.ಮಹಾರಾಷ್ಟ್ರ BJP ಉಪಾಧ್ಯಕ್ಷ ಕಿರಿಟ್ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಬಹಿರಂಗ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.