ಬಹರಾಯಿಚ್: ಉತ್ತರ ಪ್ರದೇಶದ ಬಹರಾಯಿಚ್ನಲ್ಲಿ ಶಿಕ್ಷಕನಿಂದ ತೀವ್ರವಾಗಿ ಹಲ್ಲೆಗೊಳಗಾಗಿ, 9 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ವರ್ಷದ ಬಾಲಕನೊಬ್ಬ ಶುಕ್ರವಾರ ಮೃತಪಟ್ಟಿದ್ದಾನೆ.

ಇದನ್ನೂ ಓದಿ:ನೀರಿನ ಮಡಕೆ ಮುಟ್ಟಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ದಲಿತ ಬಾಲಕ ಸಾವು

ತೀವ್ರವಾಗಿ ಹಲ್ಲೆಗೀಡಾಗಿದ್ದ ಬಾಲಕನಿಗೆ ತೀವ್ರ ಆಂತರಿಕ ರಕ್ತಸ್ರಾವ ಉಂಟಾಗಿತ್ತು ಎಂದು ಹೇಳಲಾಗಿದೆ.

ಮೃತ ಬಾಲಕನ ಅಣ್ಣ ರಾಜೇಶ್ ವಿಶ್ವಕರ್ಮ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾಸಿಕ ಶಾಲಾ ಶುಲ್ಕವಾದ ₹250 ನೀಡಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕ ನನ್ನ ತಮ್ಮನ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ, ಶಾಲಾ ಶುಲ್ಕವನ್ನು ನಾನು ಆನ್ಲೈನ್ನಲ್ಲಿ ಪಾವತಿಸಿದ್ದೆ. ಇದು ತಿಳಿಯದ ಶಿಕ್ಷಕ ನನ್ನ ತಮ್ಮನ್ನನ್ನು ಅಮಾನುಷವಾಗಿ ಹೊಡೆದಿದ್ದಾರೆ’ ಎಂದು ಆರೋಪಿಸಿದ್ದಾರೆ.

ಸಿರ್ಸಿಯಾ ಠಾಣೆ ಪೊಲೀಸರಿಗೆ ಇದೀಗ ಮೃತ ಬಾಲಕನ ಚಿಕ್ಕಪ್ಪ ದೂರು ನೀಡಿದ್ದಾರೆ.

ಹಲ್ಲೆ ಮಾಡಿದ ಶಿಕ್ಷಕ ಮೇಲ್ಜಾತಿಗೆ ಸೇರಿದವರಾಗಿದ್ದು, ದಲಿತ ಎಂಬ ಕಾರಣಕ್ಕೆ ನಮ್ಮ ಮಗನನ್ನು ಥಳಿಸಿದ್ದಾರೆ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದು, ಪ್ರಕರಣವು ಜಾತಿ ಬಣ್ಣ ಪಡೆದುಕೊಂಡಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಶ್ರಾವಸ್ತಿ ಎಸ್ಪಿ ಅರವಿಂದ್ ಕೆ.ಮೌರ್ಯ ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ಕುಡಿಯುವ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಶಿಕ್ಷಕನಿಂದ ತೀವ್ರ ಹಲ್ಲೆಗೆ ಒಳಗಾಗಿದ್ದ ಒಂಬತ್ತು ವರ್ಷದ ದಲಿತ ಬಾಲಕ ಕಳೆದ ವಾರ ಕೊನೆಯುಸಿರೆಳೆದಿದ್ದ. ಈ ಘಟನೆ ಮಾಸುವುದಕ್ಕೆ ಮೊದಲೇ ಉತ್ತರ ಪ್ರದೇಶದ ಈ ಘಟನೆ ನಡೆದಿದೆ.

ಇವುಗಳನ್ನೂ ಓದಿ

ಶಿಕ್ಷಕನ ಹೊಡೆತಕ್ಕೆ ಮೃತಪಟ್ಟ ದಲಿತ ವಿದ್ಯಾರ್ಥಿ: ಕಾಂಗ್ರೆಸ್ ಶಾಸಕ ರಾಜೀನಾಮೆ

ಉತ್ತರ ಪ್ರದೇಶ: ಶಿಕ್ಷಕರ ಹೂಜಿಯಿಂದ ನೀರು ಕುಡಿದ ದಲಿತ ವಿದ್ಯಾರ್ಥಿನಿ ಮೇಲೆ ಹಲ್ಲೆ

ಮೇಲ್ಜಾತಿಯವರು ತಯಾರಿಸಿದ ಬಿಸಿಯೂಟ ತಿನ್ನದೆ ದಲಿತ ವಿದ್ಯಾರ್ಥಿಗಳಿಂದ ಪ್ರತಿರೋಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.