ಲಖನೌ: ‘ಫ್ಯಾಕ್ಟ್ ಚೆಕ್’ ವೆಬ್‌ಸೈಟ್ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಉತ್ತರ ಪ್ರದೇಶದ ಸೆಷೆನ್ಸ್ ನ್ಯಾಯಾಲಯವೊಂದು ಸೋಮವಾರ ಆದೇಶಿಸಿದೆ.

ಸೀತಾಪುರ ಜೈಲಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಜುಬೈರ್ ಅವರನ್ನು ನ್ಯಾಯಾಲಯದ ವಿಚಾರಣೆಗೆ ಹಾಜರುಪಡಿಸಲಾಯಿತು. ಅವರ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ಗೆ ಸೆಕ್ಷನ್ 153ಬಿ, 505(1) (ಬಿ), 505(2) ಸೇರ್ಪಡೆಗೊಳಿಸಲಾಗಿದೆ.

ದ್ವೇಷ ಹರಡಿದ ಆರೋಪದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಂದು (ಜುಲೈ 11) ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಜುಬೈರ್‌ಗೆ ಸಮನ್ಸ್ ನೀಡಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೈರ್‌ಗೆ ಸುಪ್ರೀಂನಿಂದ 5 ದಿನಗಳ ಮಧ್ಯಂತರ ಜಾಮೀನು

ಸೀತಾಪುರದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಜುಬೈರ್‌ಗೆ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅದರ ಬೆನ್ನಲ್ಲೇ ಲಖಿಂಪುರ ಖೇರಿ ಪೊಲೀಸರು ಜುಬೈರ್‌ಗೆ ವಾರೆಂಟ್ ಜಾರಿ ಮಾಡಿದ್ದರು.

ಸೀತಾಪುರದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿದ್ದರೂ ದೆಹಲಿಯಲ್ಲಿ ಮತ್ತೊಂದು ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಕಾರಣ ಜುಬೈರ್ ಪೊಲೀಸರ ವಶದಲ್ಲೇ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.