ಲಖನೌ: ‘ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಅಪರಾಧಿಗಳನ್ನು ಜಾತಿ, ಧರ್ಮದ ಆಧಾರದಲ್ಲಿ ರಕ್ಷಿಸುತ್ತಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು’ ಎಂದು ದುಷ್ಕರ್ಮಿಗಳ ಗುಂಡಿನ ದಾಳಿಗೀಡಾಗಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗುರುವಾರ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರಿ ಬೆಂಬಲಿತ ಕ್ರಿಮಿನಲ್ಗಳು ಶಕ್ತಿಶಾಲಿಯಾಗಿದ್ದಾರೆ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.

ಬುಧವಾರ ಸಂಜೆ ಆಜಾದ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು.

‘ನನ್ನ 56 ಇಂಚಿನ ಎದೆ ನಿಜವಾದದ್ದು. ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ನನ್ನ ಮೇಲೆ ನಡೆಸಿದ ದಾಳಿ ಸರ್ಕಾರದ ವೈಫಲ್ಯ. ಜನರಿಗೆ ರಕ್ಷಣೆ ಒದಗಿಸುವ ಜವಾಬ್ದಾರಿಯಲ್ಲಿ ಸರ್ಕಾರ ವಿಫಲಗೊಂಡಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.