ಬಲಿಯಾ: ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮಹಮ್ಮದರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿ 25 ವರ್ಷದ ಯುವಕನನ್ನು ಮಂಗಳವಾರ ಬಂಧಿಸಲಾಗಿದೆ.

ರಸಢಾ ಪ್ರದೇಶದ ಕುರೇಜಿ ಗ್ರಾಮದ ನಿವಾಸಿ ಬಜರಂಗ್ ಸಿಂಗ್ ರಜಪುತ್ ಇನ್‌ಸ್ಟಾಗ್ರಾಮ್‌ನಲ್ಲಿ ಭಾನುವಾರ ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಎಂದು ಪೊಲೀಸ್ ಅಧಿಕಾರಿ ಶಿವ ನಾರಾಯಣ್ ವೈಶ್ ಹೇಳಿದ್ದಾರೆ.

ಬಜರಂಗ್ ಸಿಂಗ್ ಮಾಡಿದ್ದ ಪೋಸ್ಟ್‌ನ ಸ್ಕ್ರೀನ್‌ಶಾಟ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಟ್ಯಾಗ್ ಮಾಡಿ ಒತ್ತಾಯಿಸಿದ್ದರು.

ರಜಪುತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರವಾದಿ ಮಹಮ್ಮದರನ್ನು ಅಪಮಾನಿಸಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.