ಸಹರಾನ್ಪುರ (ಉತ್ತರ ಪ್ರದೇಶ): ದೆಹಲಿ–ಡೆಹ್ರಾಡೂನ್ ಶತಾಬ್ದಿ ಎಕ್ಸ್ಪ್ರೆಸ್ ರೈಲಿನ ಮೇಲೆ ಕೆಲವು ದುರ್ಷ್ಕಮಿಗಳು ಕಲ್ಲು ತೂರಾಟ ನಡೆಸಿದ್ದು, ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹರಾನ್ಪುರ ನಿಲ್ದಾಣದಿಂದ ಹೊರಟು ಹಾಸ್ಪಿಟಲ್ ಬ್ರಿಡ್ಜ್ ಮತ್ತು ಖಾನಲಂಪುರ ಯಾರ್ಡ್ ನಡುವೆ ರೈಲು ಚಲಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಈ ಸಂಬಂಧ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಯಾಣಿಕರಿಂದ ಮಾಹಿತಿ ಪಡೆದ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ಮತ್ತು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟರಲ್ಲಿ ದುರ್ಷ್ಕಮಿಗಳು ಸ್ಥಳದಿಂದ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಹರಾನ್ಪುರ ರೈಲು ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಕಲ್ಲು ತೂರಾಟ ನಡೆದಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.