ಮುಜಾಫರ್ನಗರ (ಉತ್ತರ ಪ್ರದೇಶ): ಇಲ್ಲಿನ ಭೆನ್ಸಿ ಗ್ರಾಮದಲ್ಲಿ ದಲಿತ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಮತ್ತು ಜಾತಿನಿಂದನೆ ಆರೋಪದ ಮೇಲೆ ಗ್ರಾಮದ ಮುಖ್ಯಸ್ಥ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋನಿಯಾ ಎಂಬ ಮಹಿಳೆ ನೀಡಿರುವ ದೂರಿನ ಪ್ರಕಾರ, ದಲಿತ ಸಮುದಾಯಕ್ಕೆ ಸೇರಿದ ಬಾಬುರಾಮ್ ಎಂಬುವವರು ನವೆಂಬರ್ 9ರಂದು ಮೃತಪಟ್ಟಿದ್ದರು. ಶವವನ್ನು ಗ್ರಾಮದ ಸ್ಮಶಾನಕ್ಕೆ ಕೊಂಡೊಯ್ಯುವ ವೇಳೆ ಗ್ರಾಮದ ಮುಖಂಡ ಅಮಿತ್ ಅಹ್ಲಾವತ್ ನೇತೃತ್ವದ ಗುಂಪು ಅಂತಿಮ ಸಂಸ್ಕಾರಕ್ಕೆ ಅಡ್ಡಿಪಡಿಸಿದ್ದರು. ಅಲ್ಲದೆ, ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಎಂದು ಅಧಿಕಾರಿ ರಾಮಶಿಶ್ ಯಾದವ್ ಹೇಳಿದ್ದಾರೆ.

ಪೊಲೀಸರು ಮಧ್ಯ ಪ್ರವೇಶಿಸಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಆರೋಪಿಗಳ ವಿರುದ್ಧ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.