ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಮಂಗಳವಾರ ಶಿವಸೇನಾಗೆ ಸೇರ್ಪಡೆಯಾಗಿದ್ದಾರೆ.

2019ರಲ್ಲಿ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನಿಂದ ಉತ್ತರ ಮುಂಬೈ ಕ್ಷೇತ್ರದಿಂದ ಊರ್ಮಿಳಾ ಅವರು ಸ್ಪರ್ಧಿಸಿದ್ದರು. ಆದರೆ ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದರು. ಕಾಂಗ್ರೆಸ್‌ಗೆ ಸೇರಿದ ಐದು ತಿಂಗಳ ಬಳಿಕ ಊರ್ಮಿಳಾ ಅವರು ಪಕ್ಷ ತೊರೆದು, ಶಿವಸೇನಾಗೆ ಸೇರ್ಪಡೆಯಾಗಿದ್ದಾರೆ.

ಬಾಂದ್ರಾದಲ್ಲಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿವಾಸದಲ್ಲಿ ಊರ್ಮಿಳಾ ಅವರು ಶಿವಸೇನಾಗೆ ಸೇರಿದ್ದಾರೆ.

ಊರ್ಮಿಳಾ ಅವರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವಂತೆ ಇತ್ತೀಚೆಗೆ ಶಿವಸೇನಾ ಶಿಫಾರಸು ಮಾಡಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.