ವಾಷಿಂಗ್ಟನ್: ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ಆಕ್ರಮಿಸಿರುವ ಬಿಕ್ಕಟ್ಟಿನ ಕುರಿತಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂದು ರಾತ್ರಿ ಮೌನ ಮುರಿಯಲಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ತಮ್ಮ ರಜೆಯನ್ನು ಮೊಟಕುಗೊಳಿಸಿರುವ ಬೈಡನ್, ಕ್ಯಾಂಪ್ ಡೇವಿಡ್ ಅಧ್ಯಕ್ಷರ ನಿವಾಸದಿಂದ ವಾಷಿಂಗ್ಟನ್‌ಗೆ ಹಿಂತಿರುಗುತ್ತಿದ್ದಾರೆ. ಬಳಿಕ ಅವರು, ‘ಅಫ್ಗಾನಿಸ್ತಾನದ ಬಿಕ್ಕಟ್ಟಿನ ಕುರಿತು ಹೇಳಿಕೆ ನೀಡಲಿದ್ದಾರೆ‘ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

‘ಅಧ್ಯಕ್ಷರಿಂದ ಶೀಘ್ರದಲ್ಲೇ ದೇಶವು ಹೇಳಿಕೆ ನಿರೀಕ್ಷಿಸಬಹುದು. ಅವರು ಈಗಾಗಲೇ ತಮ್ಮ ರಾಷ್ಟ್ರೀಯ ಭದ್ರತಾ ತಂಡದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪರಿಸ್ಥಿತಿ ಬಗ್ಗೆ ಗಹನವಾದ ಚರ್ಚೆ ನಡೆದಿದೆ’ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಎಬಿಸಿಗೆ ತಿಳಿಸಿದ್ದಾರೆ.

ಅಫ್ಗಾನಿಸ್ತಾನದಿಂದ ಅಮೆರಿಕ ಪಡೆಯನ್ನು ಹಿಂಪಡೆಯುವುದಾಗಿ ಅಮೆರಿಕ ಘೋಷಿಸಿದ ಬೆನ್ನಲ್ಲೇ ತಾಲಿಬಾನಿಗಳು ಒಂದೊಂದೇ ನಗರವನ್ನು ಆಕ್ರಮಿಸಿಕೊಂಡರು. ಭಾನುವಾರ, ತಾಲಿಬಾನಿಗಳು ರಾಜಧಾನಿ ಕಾಬೂಲ್‌ಗೆ ಬರುವ ಹೊತ್ತಿಗೆ ಅಧ್ಯಕ್ಷ ಅಶ್ರಫ್ ಘನಿ ಪಲಾಯನ ಮಾಡಿದ್ದಾರೆ.

ಈ ಮಧ್ಯೆ, ತಾಲಿಬಾನ್ ಉಗ್ರರ ಕ್ರೌರ್ಯಕ್ಕೆ ಬೆದರಿದ ಹಲವು ಜನರು ದೇಶ ತೊರೆಯಲು ಕಾಬೂಲ್ ಏರ್‌ಪೋರ್ಟ್‌ಗೆ ಆಗಮಿಸಿದ್ದರು. ಈ ಸಂದರ್ಭ, ನೂಕುನುಗ್ಗಲು, ಮತ್ತಿತರ ಅವಘಡದಲ್ಲಿ ಐವರು ಅಸುನೀಗಿದ್ದಾರೆ. ಜನರನ್ನು ನಿಯಂತ್ರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ.. ಕಾಬೂಲ್ ವಾಯುಪ್ರದೇಶ ಬಂದ್: ದೆಹಲಿ–ಕಾಬೂಲ್ ಏರ್ ಇಂಡಿಯಾ ವಿಮಾನ ರದ್ದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.