ಲಖನೌ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು (ಭಾನುವಾರ) ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಹನುಮಾನ್ ದೇವಸ್ಥಾನಕ್ಕೆ ರಜನಿಕಾಂತ್ ಭೇಟಿ ನೀಡಿರುವ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್ಐ’ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್, ‘ನಾನು ತುಂಬಾ ಅದೃಷ್ಟಶಾಲಿ. ನಾನು ಯಾವಾಗಲೂ ಇಲ್ಲಿಗೆ ಭೇಟಿ ನೀಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶಕ್ಕೆ 2 ದಿನಗಳ ಭೇಟಿ ಕೈಗೊಂಡಿರುವ ರಜನಿಕಾಂತ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.