ಬಲ್ಲಿಯಾ: ಗೊಂಡಿಯಾ-ಬರೌನಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಬೋಗಿ ಪರಿಚಾರಕ ಕಿರುಕುಳ ನೀಡಿದ್ದಾನೆ ಎಂದು ರೈಲು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಅಕ್ಟೋಬರ್ 22 ರಂದು ಬಲ್ಲಿಯಾ ನಿಲ್ದಾಣದಿಂದ ರೈಲು ಹೊರಟ ನಂತರ ಈ ಘಟನೆ ನಡೆದಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

‘ಆಸನದಲ್ಲಿ ಮಲಗಿದ್ದ ಬಿಹಾರದ ಮೋತಿಹಾರಿ ಜಿಲ್ಲೆಯ ಯುವತಿಯೊಬ್ಬಳಿಗೆ ಬೋಗಿ ಪರಿಚಾರಕ ರಾಕೇಶ್ ಕುಮಾರ್ ಶ್ರೀವಾಸ್ತವ ಕಿರುಕುಳ ನೀಡಿದ್ದಾನೆ’ ಎಂದು ಅವರು ತಿಳಿಸಿದ್ದಾರೆ.

ಸಂತ್ರಸ್ತೆ ಕೂಡಲೇ ರೈಲ್ವೆ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಕ್ಟೋಬರ್ 24 ರಂದು ಛಾಪ್ರಾ ಜಿಆರ್ಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಶನಿವಾರ ಬಲ್ಲಿಯಾ ರೈಲ್ವೆ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.