ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೋತಿದ್ದರೂ, ಅವರನ್ನೇ ಉತ್ತರಾಖಂಡದ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆ ಎನ್ನಲಾಗಿದೆ.

ಬಿಜೆಪಿ ಹೈಕಮಾಂಡ್ ಧಾಮಿ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬಹುದು. ಜತೆಗೆ ರಾಜ್ಯದ ಕೆಲ ಬಿಜೆಪಿ ನಾಯಕರು ಧಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂಬ ಆಕಾಂಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಆದರೆ, ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಯುವ ಮುಖಂಡರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಘೋಷಣೆ ಮಾಡಿದ್ದರು. ಆದರೆ, ಅವರು ಯಾರು ಎಂಬುದು ಇನ್ನೂ ಗೊತ್ತಾಗಿಲ್ಲ.

ಧಾಮಿ ಅವರಲ್ಲದೆ ಸಂಸದರಾದ ರಮೇಶ್ ನಿಶಾಂಕ್ ಪೊಖ್ರಿಯಾಲ್, ಬಿಜೆಪಿ ಮಾಧ್ಯಮ ಮುಖ್ಯಸ್ಥ ಅನಿಲ್ ಬಲೂನಿ, ರಾಜ್ಯ ಸಚಿವರಾದ ಅಜಯ್ ಭಟ್, ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ ಹಾಗೂ ಅರವಿಂದ್ ಪಾಂಡೆ ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿಬರುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.