ಡೆಹರಾಡೂನ್: ಕಾಂಗ್ರೆಸ್ ಸುಳ್ಳು ಸುದ್ದಿ ಹರಡುತ್ತಿದ್ದು, ಜನರು ಅದಕ್ಕೆ ಮರಳಾಗಬಾರದು. ಬಿಜೆಪಿಗೆ ಮತ ನೀಡಿ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮನವಿ ಮಾಡಿದ್ದಾರೆ.

ನವೆಂಬರ್ 20ರಂದು ನಡೆಯಲಿರುವ ಕೇದಾರನಾಥ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿ ಆಶಾ ನೌಟಿಯಾಲ್ ಪರ ರುದ್ರಪ್ರಯಾಗ ಜಿಲ್ಲೆಯ ಚೋಪ್ಪಾ ಮತ್ತು ಚಂದ್ರನಗರದಲ್ಲಿ ಚುನಾವಣಾ ಪ್ರಚಾರದ ಸಭೆಯನ್ನು ಉದ್ದೇಶಿಸಿ ಸಿಎಂ ಮಾತನಾಡಿದರು.

‘ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಮತ್ತೊಮ್ಮೆ ಸುಳ್ಳಿನ ಮೊರೆ ಹೋಗುತ್ತಿದೆ. ನೀವು ಅದರಿಂದ ದಾರಿ ತಪ್ಪಬಾರದು. ದೆಹಲಿಯಲ್ಲಿ ದೇವಸ್ಥಾನದ ಅಡಿಪಾಯ ಹಾಕಲು ನಾನು ಇಲ್ಲಿಂದ ಕಲ್ಲು ತೆಗೆದುಕೊಂಡು ಹೋಗಿದ್ದೇನೆ ಎಂದು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಕಾಂಗ್ರೆಸ್ನ ಸುಳ್ಳುಗಳು ನಿಮ್ಮನ್ನು ಒಡೆಯುವ ಷಡ್ಯಂತ್ರದ ಭಾಗವಾಗಿದ್ದು, ಅವರ ಕುತಂತ್ರಕ್ಕೆ ಬಲಿಯಾಗಬೇಡಿ’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮಹಿಳಾ ವಿರೋಧಿ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿದ ಧಾಮಿ, ‘ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡಿರುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ. ಅಲ್ಲದೆ, ಸರ್ಕಾರಿ ಉದ್ಯೋಗಗಳಲ್ಲಿ ಸ್ಥಳೀಯ ಮಹಿಳೆಯರಿಗೆ ಉತ್ತರಾಖಂಡ ಸರ್ಕಾರ ಶೇ 30ರಷ್ಟು ಮೀಸಲಾತಿ ನೀಡಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಆಹ್ವಾನ ನೀಡಿದ್ದರೂ ಕಾಂಗ್ರೆಸ್ ನಾಯಕರು ಭಾಗವಹಿಸಲಿಲ್ಲ. ಏಕೆಂದರೆ, ಪಕ್ಷವು ನಿರ್ದಿಷ್ಟ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಭಯದಲ್ಲಿದೆ ಎಂದು ಧಾಮಿ ಹೇಳಿದ್ದಾರೆ.
.Maharashtra Election: ನಾಗ್ಪುರದಲ್ಲಿ ₹14.5 ಕೋಟಿ ಮೌಲ್ಯದ ಚಿನ್ನ ಜಪ್ತಿ.ಒಡಿಶಾ | ಸಗಣಿ ರಾಶಿಯಿಂದ ಅಪಾರ ಪ್ರಮಾಣದ ಹಣ ಪತ್ತೆ ಹಚ್ಚಿದ ಪೊಲೀಸರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.