ನವದೆಹಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತದಿಂದಾಗಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ತಲಾ ₹ 2 ಲಕ್ಷ ಪರಿಹಾರವನ್ನು ನೀಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅನುಮೋದನೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ಭಾನುವಾರ ತಿಳಿಸಿದೆ.

ಪ್ರವಾಹದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ₹ 50,000 ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ನಂದಾ ದೇವಿ ಹಿಮನದಿಯ ಒಂದು ಭಾಗದಲ್ಲಿ ಹಿಮಪಾತವಾಗಿ, ಅಲಕಾನಂದ ನದಿಯು ಉಕ್ಕಿ ಹರಿದು ಜಲವಿದ್ಯುತ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದ 100 ಕ್ಕೂ ಹೆಚ್ಚು ಕಾರ್ಮಿಕರು ಕಣ್ಮರೆಯಾಗಿದ್ದಾರೆ.

ಇದನ್ನೂ ಓದಿ:Live Updates: ಉತ್ತರಾಖಂಡದಲ್ಲಿ ಹಿಮಪಾತ; 125 ಜನರು ಕಾಣೆಯಾಗಿರುವ ಶಂಕೆ- ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ Live

ಈ ಕುರಿತು ಟ್ವೀಟ್ ಮಾಡಿರುವ ಪಿಎಂಒ, ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತದಿಂದಾಗಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಪಿಎಂಎನ್ಆರ್ಎಫ್ (ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ) ಯಿಂದ ತಲಾ ₹ 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ₹ 50,000 ಗಳನ್ನು ನೀಡುವುದಾಗಿ ತಿಳಿಸಿದೆ.

ಗಂಗಾ ನದಿಯ ಎಲ್ಲಾ ಸಂಕೀರ್ಣ ಉಪನದಿಗಳಾದ ಧೌಲಿ ಗಂಗಾ, ರಿಷಿ ಗಂಗಾ ಮತ್ತು ಅಲಕಾನಂದ ನದಿಗಳಲ್ಲಿ ಹಠಾತ್ ಪ್ರವಾಹ ಉಂಟಾಗಿ ಎತ್ತರದ ಪ್ರದೇಶಗಳಲ್ಲಿ ವ್ಯಾಪಕ ಭೀತಿ ಮತ್ತು ದೊಡ್ಡ ಪ್ರಮಾಣದ ವಿನಾಶಕ್ಕೆ ಕಾರಣವಾಯಿತು.

ಇದನ್ನೂ ಓದಿ:ಉತ್ತರಾಖಂಡದಲ್ಲಿ ಹಿಮಪಾತ: ಉತ್ತರಾಖಂಡವನ್ನು ಕಾಡಿದ್ದ ಪ್ರಮುಖ ನೈಸರ್ಗಿಕ ವಿಕೋಪಗಳು

ಸಂತ್ರಸ್ತ ಕುಟುಂಬಗಳಿಗೆ 4 ಲಕ್ಷ ಪರಿಹಾರ

ಉತ್ತರಾಖಂಡದಲ್ಲಿ ಸಂಭವಿಸಿದ ವಿನಾಶದ ಬಗ್ಗೆ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಪತ್ರಿಕಾಗೋಷ್ಠಿಯಲ್ಲಿ ಐಟಿಬಿಪಿ ಮತ್ತು ಎಸ್ಡಿಆರ್ಎಫ್ ತಂಡ ಜನರನ್ನು ರಕ್ಷಿಸುವಲ್ಲಿ ತೊಡಗಿದೆ ಎಂದು ಹೇಳಿದರು. ಅಲ್ಲದೆ, ಸಂತ್ರಸ್ತರ ಕುಟುಂಬಗಳಿಗೆ ತಲಾ ₹ 4 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದರು.

ಇದನ್ನೂ ಓದಿ:ಉತ್ತರಾಖಂಡದಲ್ಲಿ ಹಿಮಪಾತ: ಹವಾಮಾನ ಪ್ರತಿಕೂಲ ಪರಿಸ್ಥಿತಿ ಇಲ್ಲ– ಹವಾಮಾನ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.