ತಪೋವನ (ಉತ್ತರಾಖಂಡ): ತಪೋವನ ಸುರಂಗದಲ್ಲಿ ಸಿಲುಕಿರುವ ಜನರ ರಕ್ಷಣೆಗಾಗಿ ಶುಕ್ರವಾರ 6ನೇ ದಿನ ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಪ್ರವಾಹದಿಂದಾಗಿ ಇದುವರೆಗೆ 36 ಜನರು ಮೃತಪಟ್ಟಿದ್ದಾರೆ. 204ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಧೌಲಿ ಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಗುರುವಾರ ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಸುರಂಗದೊಳಗೆ ಕಾರ್ಯಾಚರಣೆ ನಡೆಸುತ್ತಿದ್ದ ಭದ್ರತಾ ಪಡೆ ಸಿಬ್ಬಂದಿ ಹೊರ ಬಂದಿದ್ದರು. ಕೆಸರು ಹಾಗೂ ಅವಶೇಷ ತೆಗೆಯುತ್ತಿದ್ದ ಭಾರಿ ಯಂತ್ರಗಳನ್ನು ಕೂಡ ಹೊರ ತೆಗೆಯಲಾಗಿತ್ತು.

ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ವಾತಿ ಎಸ್. ಭಡಾರಿಯಾ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.