ಗೋರಖಪುರ: ಲೋಕಸಭಾ ಚುನಾವಣೆಯ ಬಳಿಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಭಾನುವಾರ ಮೊದಲ ಬಾರಿಗೆ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು.

ಗೋರಖಪುರದಲ್ಲಿ ಜನತಾ ದರ್ಶನ ಹಮ್ಮಿಕೊಂಡಿದ್ದರು. ಸಿಎಂ ಭೇಟಿ ವೇಳೆ ನೂರಾರು ಜನರು ಅವರ ಬಳಿ ಬಂದು ಆರೋಗ್ಯ ಸಮಸ್ಯೆ ಸೇರಿದಂತೆ ಸಂಕಷ್ಟಗಳಿಗೆ ರಾಜ್ಯಸರ್ಕಾರದಿಂದ ಸಹಾಯ ಮಾಡುವಂತೆ ಕೋರಿದರು.

ಜನತಾ ದರ್ಶನ ವೇಳೆ ಸಿಎಂ ಯೋಗಿ ಅವರು 350 ಜನರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆ ಪರಿಹರಿಸಿಕೊಡುವುದಾಗಿ ಭರವಸೆ ನೀಡಿದರು. ಅರ್ಹ ಜನರಿಗೆ ಮುಖ್ಯಮಂತ್ರಿಗಳ ವಿವೇಚನಾ ನಿಧಿಯಿಂದ ಹಣ ದೊರೆಯಲಿದೆ ಎಂದು ಸಾಂತ್ವನ ಹೇಳಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಯ ಇಲಾಖೆ ಮತ್ತು ಪೊಲೀಸ್ ಠಾಣೆಗಳಲ್ಲಿ ದಾಖಲಾದ ದೂರಿನ ಬಗ್ಗೆ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಈ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.