ನವದೆಹಲಿ: ಪ್ರತಿಕೂಲ ಹವಾಮಾನದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದಪ್ರಸಿದ್ಧ ಮಾತಾ ವೈಷ್ಣೋದೇವಿಯಾತ್ರೆ ಇಂದಿನಿಂದ ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ತಪ್ಪಲಲ್ಲಿರುವ ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲ ಪ್ರದೇಶದಲ್ಲಿ ಭಾರಿ ಮಳೆ ಸುರಿದಿತ್ತು. ಭಕ್ತರ ಸುರಕ್ಷತೆ ದೃಷ್ಟಿಯಿಂದ ವೈಷ್ಣೋ ದೇವಿ ದೇಗುಲ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದರು.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ಸಾವು-ನೋವು ಅಥವಾ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಶುಲ್ ಗಾರ್ಗ್ ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ಹಲವಡೆ ಪ್ರವಾಹ ಸ್ಥಿತಿ ಉಂಟಾಗಿದ್ದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು.

ಕಾತ್ರಾದಲ್ಲಿರುವ ಬೇಸ್ ಕ್ಯಾಂಪ್ ಪ್ರದೇಶದಲ್ಲಿ ಶುಕ್ರವಾರ ಸಂಜೆಯಿಂದಲೇ ಹಲವಾರು ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದಿತ್ತು. ಇದರಿಂದಾಗಿ ಸಾವಿರಾರು ಭಕ್ತರಿಗೆ ತೊಂದರೆ ಉಂಟಾಗಿತ್ತು.

ಓದಿ...ವಿಡಿಯೊ: ಎರಡು ಅಂತಸ್ತಿನ ಮನೆಯನ್ನೇ 500 ಅಡಿ ಸರಿಸಿ ಹೆದ್ದಾರಿಗೆ ಜಾಗ ಬಿಟ್ಟ ರೈತ

ಓದಿ...ಅಬಕಾರಿ ನೀತಿ ಹಗರಣ: ಸಿಸೋಡಿಯಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ ಸಿಬಿಐ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.