ವಾರಾಣಸಿ (ಪಿಟಿಐ): ಜ್ಞಾನವಾಪಿ ಮಸೀದಿಯ ಸಮೀಕ್ಷೆ ವೇಳೆ ಪತ್ತೆಯಾದ ಪುರಾವೆಗಳನ್ನು ಕಾಪಾಡುವಂತೆ, ದಾಖಲಿಸುವಂತೆ ಮತ್ತು ಅದನ್ನು ಪಟ್ಟಿಮಾಡಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ (ಎಎಸ್‌ಐ) ವಾರಾಣಸಿ ಜಿಲ್ಲಾ ನ್ಯಾಯಾಲಯವು ಬುಧವಾರ ಆದೇಶ ಹೊರಡಿಸಿದೆ.

ನ್ಯಾಯಾಧೀಶ ಎ.ಕೆ. ವಿಶ್ವೇಶ್ ಅವರು ಈ ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರತಿಯನ್ನು ಸರ್ಕಾರ ಪರ ವಕೀಲರು, ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರ ಪರ ವಕೀಲರಿಗೆ ಮರುದಿನ ನೀಡಲಾಯಿತು ಎಂದು ಹಿಂದೂ ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್ ಅವರು ತಿಳಿಸಿದ್ದಾರೆ.

ಸಾಕ್ಷ್ಯನಾಶದ ಅಪಾಯವಿರುವ ಕಾರಣ ಎಎಸ್‌ಐ ಸಮೀಕ್ಷೆ ನಡೆಸುವ ವೇಳೆ ಮುಸ್ಲಿಮರಿಗೆ ಜ್ಞಾನವಾಪಿ ಮಸೀದಿ ಒಳಗೆ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ಕೋರಿ ಹಿಂದೂ ಅರ್ಜಿದಾರರಾದ ರಾಖಿ ಸಿಂಗ್ ಅವರು ಅರ್ಜಿ ಸಲ್ಲಿಸಿದ್ದರು.

ಸಂಬಂಧಪಟ್ಟ ಎಲ್ಲಾ ವಕೀಲರ ಸಮ್ಮುಖದಲ್ಲಿ ಸೆಪ್ಟೆಂಬರ್ 8ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಸಮೀಕ್ಷೆ ನಡೆಸಿ ಅರ್ಜಿ ಸಲ್ಲಿಸಲು ನಾಲ್ಕು ವಾರಗಳ ಹೆಚ್ಚುವರಿ ಕಾಲಾವಕಾಶವನ್ನು ಎಎಸ್‌ಐಗೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.