ಅಲಪ್ಪುಳ(ಕೇರಳ): ಗಣಿಗಾರಿಕೆ ಮಾಫಿಯಾದೊಂದಿಗೆ ಶಾಮೀಲಾಗಿ, ಭಾರಿ ಪ್ರಮಾಣದ ಸಂಪತ್ತು ಗಳಿಸಿದ್ದಾಗಿ ಆರೋಪಿಸಿರುವ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ವೇಣುಗೋಪಾಲ್ ಅವರು ಅಲಪ್ಪುಳ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶೋಭಾ ಅವರು ಅಲಪ್ಪುಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ. ಇತ್ತೀಚೆಗೆ ಟಿ.ವಿ.ವಾಹಿನಿಯೊಂದರಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ವೇಣುಗೋಪಾಲ್ ವಿರುದ್ಧ ಈ ಆರೋಪ ಮಾಡಿದ್ದರು.

ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯಿಸಿರುವ ಶೋಭಾ ಸುರೇಂದ್ರನ್, ‘ತಮ್ಮ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ವೇಣುಗೋಪಾಲ್ ನಡೆಯನ್ನು ಸ್ವಾಗತಿಸುತ್ತೇನೆ. ತಮ್ಮ ಬಳಿ ಇರುವ ಸಾಕ್ಷ್ಯಗಳ ಆಧಾರದ ಮೇಲೆಯೇ ನಾನು ಅವರ ವಿರುದ್ಧ ಆರೋಪಗಳನ್ನು ಮಾಡಿರುವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.