ಭೋಪಾಲ್: ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಅಜೀಜ್ ಖುರೇಷಿ ಶುಕ್ರವಾರ ಭೋಪಾಲ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 83 ವರ್ಷವಾಗಿತ್ತು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ಸೋದರಳಿಯ ಸುಫಿಯಾನ್ ಆಲಿ ತಿಳಿಸಿದ್ದಾರೆ.

ಖುರೇಷಿ ಅವರು ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

1972 ರಲ್ಲಿ ಮಧ್ಯಪ್ರದೇಶದ ಸೆಹೋರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 1984ರಲ್ಲಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಇಂದು ಸಂಜೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಸುಫಿಯಾನ್ ಮಾಹಿತಿ ನೀಡಿದ್ದಾರೆ.
.ಕೆ.ಶಿವರಾಮ್ ನಿಧನ: ಸಿಎಂ ಸಿದ್ದರಾಮಯ್ಯ, ಬಿಎಸ್ವೈ–ಎಚ್ಡಿಕೆ ಸೇರಿ ಗಣ್ಯರ ಸಂತಾಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.