ನವದೆಹಲಿ: ಹಿರಿಯ ನಟಿ ಆಶಾ ಪಾರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದೆ.

ಇಲ್ಲಿನ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ 68ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಆಶಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

‘ಭಾರತ ಸರ್ಕಾರ ನನಗೆ ನೀಡಬಹುದಾದ ಬಹು ದೊಡ್ಡ ಗೌರವ ಇದಾಗಿದೆ. ನನ್ನ 80ನೇ ಹುಟ್ಟುಹಬ್ಬಕ್ಕೆ ಒಂದು ದಿನ ಮೊದಲು ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದೇನೆ. ಇದು ನನಗೆ ಅತೀವ ಸಂತಸ ತಂದಿದೆ. ನನ್ನನ್ನು ಆಯ್ಕೆ ಮಾಡಿದ ಎಲ್ಲಾ ತೀರ್ಪುಗಾರರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದು ಆಶಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.