ನವದೆಹಲಿ: ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ವಿಧಿಸಿದ್ದ ಮರಣ ದಂಡನೆ ಶಿಕ್ಷೆಯನ್ನು ಕತಾರ್ ನ್ಯಾಯಾಲಯ ತಗ್ಗಿಸಿರುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ರಾಜತಾಂತ್ರಿಕ ಪ್ರಯತ್ನಗಳಿಗೆ ಸಿಕ್ಕ ಗೆಲುವು ಎಂದು ಬಿಜೆಪಿ ಹೇಳಿದೆ.

ಭಾರತೀಯರಿಗೆ ಶಿಕ್ಷೆ ತಗ್ಗಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತದ ವಿದೇಶಾಂಗ ನೀತಿಯ ಸಾಮರ್ಥ್ಯವನ್ನು ಇಡೀ ಜಗತ್ತು ಗುರುತಿಸುತ್ತಿದೆ ಎಂಬುದನ್ನು ಈ ಬೆಳವಣಿಗೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

'ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಕತಾರ್‌ನಲ್ಲಿ ಮರಣ ದಂಡನೆ ಶಿಕ್ಷೆ ತಗ್ಗಿಸಿರುವುದು ಮೋದಿಯವರ ವಿದೇಶಾಂಗ ನೀತಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಸಿಕ್ಕ ಜಯ' ಎಂದು ಅವರು ಹೇಳಿದ್ದಾರೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ಹಾಗೂ ಇತರ ಸೇವೆಗಳನ್ನು ಒದಗಿಸುವ ದೋಹಾ ಮೂಲದ ದಹ್ರಾ ಗ್ಲೋಬಲ್ ಕಂಪನಿಯ ನೌಕರರಾಗಿದ್ದ ಭಾರತೀಯರನ್ನು 2022ರ ಆಗಸ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಬೇಹುಗಾರಿಕೆ ಆರೋಪದಡಿ ಅವರಿಗೆ ಮರಣ ದಂಡನೆ ವಿಧಿಸಲಾಗಿತ್ತು.

ಮರಣ ದಂಡನೆ ಶಿಕ್ಷೆ ಪ್ರಶ್ನಿಸಿ ಕಳೆದ ತಿಂಗಳು ಭಾರತ ಸರ್ಕಾರವು ಕತಾರ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯ ವಿಚಾರಣೆ ನಡೆಸಿದ ಕತಾರ್ ನ್ಯಾಯಾಲಯ, ಶಿಕ್ಷೆ ಕಡಿಮೆ ಮಾಡಲಾಗಿದೆ.
.ಕತಾರ್: ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ.ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾದ 8 ಸಿಬ್ಬಂದಿಯನ್ನು ಭೇಟಿಯಾದ ಭಾರತದ ರಾಯಭಾರಿ.COP28 Summit 2023: ಕತಾರ್ ದೊರೆ ಭೇಟಿಯಾಗಿ ಪ್ರಧಾನಿ ಮೋದಿ ಮಾತುಕತೆ.8 ಭಾರತೀಯರ ಮರಣ ದಂಡನೆ ಶಿಕ್ಷೆಯನ್ನು ತಗ್ಗಿಸಿದ ಕತಾರ್ ನ್ಯಾಯಾಲಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.