ನವದೆಹಲಿ: ಹಿಂದಿ ಪ್ರಾಬಲ್ಯವಿರುವ ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡದಲ್ಲಿ ಕಾಂಗ್ರೆಸ್ ಗೆಲುವಿಗೆ ಸೋನಿಯಾ ಗಾಂಧಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಖುಷಿತಂದಿದೆ.ಇದು ಬಿಜೆಪಿಯ ನಕಾರಾತ್ಮಕ ರಾಜಕೀಯದ ವಿರುದ್ಧ ಸಿಕ್ಕಿದ ಗೆಲುವು ಎಂದು ಸೋನಿಯಾ ಹೇಳಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಪರಾಭವಗೊಳಿಸಿ ಮೋದಿ ನೇತೃತ್ವದ ಎನ್‍ಡಿಎ ಅಧಿಕಾರಕ್ಕೇರಿತ್ತು.ಈ ಸೋಲಿನಿಂದ ಮುಜುಗರ ಅನುಭವಿಸಿದ್ದಕಾಂಗ್ರೆಸ್‍ಗೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹುರುಪು ತುಂಬಿದೆ.

ಡಿ.11, 2017ರಂದು ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಒಂದು ವರ್ಷ ಕಳೆದ ಮೇಲೆ ಅದೇ ದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ಕಾಂಗ್ರೆಸ್ ಪಾಳಯದಲ್ಲಿ ಖುಷಿ ತಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.