ನವದೆಹಲಿ: ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಉಭಯ ರಾಷ್ಟ್ರಗಳ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದಾಗಿದೆ.

ನಿನ್ನೆ( ಮಂಗಳವಾರ) ತಡರಾತ್ರಿ ದೆಹಲಿಗೆ ಆಗಮಿಸಿದ ಫಾಮ್ ಮಿನ್ ಚಿನ್ಹ್ ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರಾ ಮಾರ್ಗರಿಟಾ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
.ವಯನಾಡು ಭೂಕುಸಿತ: ಮೃತರ ಸಂಖ್ಯೆ 148ಕ್ಕೆ ಏರಿಕೆ, ಹಲವರು ಸಿಲುಕಿರುವ ಶಂಕೆ.ವಯನಾಡು ಭೂಕುಸಿತ | ಸಮರೋಪಾದಿ ರಕ್ಷಣಾ ಕಾರ್ಯ; ಸೇನೆಯೂ ಭಾಗಿ.
‘ದೆಹಲಿಗೆ ಆಗಮಿಸಿರುವ ವಿಯೆಟ್ನಾಂನ ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರಿಗೆ ಆತ್ಮೀಯ ಸ್ವಾಗತ, ಭಾರತ ಮತ್ತು ವಿಯೆಟ್ನಾಂ ಪರಸ್ಪರ ನಂಬಿಕೆಯ ಆಧಾರದ ಮೇಲೆ ದೀರ್ಘಕಾಲದ ಸ್ನೇಹವನ್ನು ಹಂಚಿಕೊಂಡಿವೆ. ಈ ಭೇಟಿಯು ನಮ್ಮ ಬಾಂಧವ್ಯ ವೃದ್ಧಿಸಲಿವೆ‘ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ನಲ್ಲಿ ತಿಳಿಸಿದ್ದಾರೆ.

ಆಗಸ್ಟ್ 1ರಂದು ಭೇಟಿ ನೀಡುವ ನಾಯಕನಿಗೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸ್ವಾಗತವನ್ನು ನೀಡಲಾಗುವುದು. ನಂತರ ಚಿನ್ಹ್ ಅವರು ಮಹಾತ್ಮಾ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಜ್ಘಾಟ್ಗೆ ಭೇಟಿ ನೀಡಲಿದ್ದಾರೆ. ಅಂದೇ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.
.Wayanad Landslide | ಸುಖದ ನಿದ್ದೆಯಿಂದ ದುಃಖದ ಮಡುವಿಗೆ....Budget 2024 | ವಿಪಕ್ಷಗಳಿಗೆ ನಿರ್ಮಲಾ ತಿರುಗೇಟು.
ಚಿನ್ಹ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನೂ ಭೇಟಿ ಮಾಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

2016ರ ಸೆಪ್ಟೆಂಬರ್ನಲ್ಲಿ ಪ್ರಧಾನಿ ಮೋದಿ ಅವರು ವಿಯೆಟ್ನಾಂಗೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.