ಹೈದರಾಬಾದ್: ವೀಸಾ ದುರ್ಬಳಕೆ ಮಾಡಿಕೊಂಡು ಪ್ರಯಾಣ ಮಾಡಲು ಯತ್ನಿಸಿದ 20 ಮಹಿಳೆಯರನ್ನು ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪ್ರವಾಸಿ ವೀಸಾ ಪಡೆದು, ವೃತ್ತಿ ವೀಸಾ ಪಡೆದವರು ಸಾಗುವ ಗೇಟ್‌ನಿಂದ ಹೋಗಲು ಯತ್ನಿಸಿದ್ದಾರೆ. ಇದಕ್ಕೆ ಅವಕಾಶವಿಲ್ಲ. ಈ ಬಗ್ಗೆ ಬಂಧಿತ ಮಹಿಳೆಯರನ್ನು ವಿಚಾರಣೆ ನಡೆಸುತಿದ್ದೇವೆ ಎಂದು ವಿಮಾನ ನಿಲ್ದಾಣದ ಪೊಲೀಸ್ ಅಧಿಕಾರಿ ವಿಜಯ್ ಭಾಸ್ಕರ್ ರೆಡ್ಡಿ ತಿಳಿಸಿದ್ದಾರೆ.

‘ಗಲ್ಫ್ ಸೇರಿ ಹಲವು ರಾಷ್ಟ್ರಗಳಿಗೆ ಉದ್ಯೋಗ ನಿಮಿತ್ತ ವಲಸೆ ಹೋಗುವವರಿಗೆ ವೃತ್ತಿ ವಲಸೆ ಅನುಮತಿ ಪಡೆದ ಮುದ್ರೆ ಬೇಕಾಗುತ್ತದೆ’ ಎಂದಿದ್ದಾರೆ.

‘ಉದ್ಯೋಗ ಕೊಡಿಸುವ ನೆಪದಲ್ಲಿ ಜನರನ್ನು ವಂಚಿಸಲಾಗುತ್ತಿದೆ. ಇದನ್ನು ತಡೆಯಲು ಹಲವಾರು ಕ್ರಮಕೈಗೊಂಡಿದ್ದೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.