ದುಮ್ಕಾ (ಜಾರ್ಖಂಡ್): ಜಾರ್ಖಂಡ್‌ನಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದ್ದು, ರಾಜ್ಯದ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಬಿಜೆಪಿಗೆ ಮತ ಹಾಕುವಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಜನರಲ್ಲಿ ಮನವಿ ಮಾಡಿದ್ದಾರೆ.

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಬಿಜೆಪಿಯ ‘ಪರಿವರ್ತನಾ ಯಾತ್ರೆ’ಯಲ್ಲಿ ಮಾತನಾಡಿದ ಅವರು, ‘ಆಡಳಿತಾರೂಢ ಜೆಎಂಎಂ ನೇತೃತ್ವದ ಒಕ್ಕೂಟ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ. ರಾಜ್ಯದ ನೆಲ–ಜಲ, ಅರಣ್ಯ ಪ್ರದೇಶವನ್ನು ರಕ್ಷಿಸಲು ಮೈತ್ರಿ ಸರ್ಕಾರವನ್ನು ಕಿತ್ತೊಗೆದು, ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಮಯ ಬಂದಿದೆ’ ಎಂದು ಹೇಳಿದ್ದಾರೆ.

‘ಜೆಎಂಎಂ ಮತ್ತು ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷಗಳಾಗಿವೆ. ₹1,000 ಕೋಟಿಯ ನರೇಗಾ ಹಗರಣ, ₹300 ಕೋಟಿಯ ಭೂ ಹಗರಣ ಮತ್ತು ₹1,000 ಕೋಟಿಯ ಗಣಿಗಾರಿಕೆ ಹಗರಣಗಳಲ್ಲಿ ಈ ಪಕ್ಷಗಳು ಭಾಗಿಯಾಗಿವೆ. ಕಾಂಗ್ರೆಸ್ ನಾಯಕರೊಬ್ಬರಿಗೆ ಸೇರಿದ ₹300 ಕೋಟಿ ಮೌಲ್ಯದ ಆಸ್ತಿ ಮತ್ತು ಸಚಿವರ ಸಹಾಯಕನ ಮನೆಯಲ್ಲಿ ₹35 ಕೋಟಿಯನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಯಾರೇ ಭ್ರಷ್ಟಾಚಾರದಲ್ಲಿ ತೊಡಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಜೈಲಿಗೆ ಹೋಗಬೇಕಾಗುತ್ತದೆ. ಈ ಹಿಂದೆ ಶೇ 44ರಷ್ಟಿದ್ದ ಜಾರ್ಖಂಡ್‌ನ ಬುಡಕಟ್ಟು ಜನಸಂಖ್ಯೆಯು ವೋಟ್ ಬ್ಯಾಂಕ್ ರಾಜಕೀಯದಿಂದಾಗಿ ಶೇ 28ಕ್ಕೆ ಇಳಿದಿದೆ. ಕಾಂಗ್ರೆಸ್ ಮತ್ತು ಜೆಎಂಎಂ ಯಾವಾಗಲೂ ಬುಡಕಟ್ಟು ಜನರ ಅಭಿವೃದ್ಧಿಯ ಭರವಸೆ ನೀಡಿ ಮತ ಕೇಳುತ್ತವೆ. ಆದರೆ, ಅವರಿಗಾಗಿ ಏನನ್ನೂ ಮಾಡಿಲ್ಲ’ ಎಂದು ಯಾದವ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.