ನವದೆಹಲಿ: ಮತದಾರರ ಗುರುತಿನ ಚೀಟಿ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡದವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದು ಸ್ವ–ಇಚ್ಛೆಯಿಂದ ನಡೆಯುವ ಪ್ರಕ್ರಿಯೆ ಎಂದೂ ಹೇಳಿದೆ.

ಮತದಾರರ ಗುರುತಿಗಾಗಿ ಅವರಿಂದ (ಸ್ವ–ಇಚ್ಛೆಯ ನೆಲೆಯಲ್ಲಿ) ಆಧಾರ್ ಸಂಖ್ಯೆ ಪಡೆಯಲು2021ರ ಚುನಾವಣಾ ಕಾನೂನುಗಳ (ತಿದ್ದುಪಡಿ) ಕಾಯ್ದೆಯು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಲೋಕಸಭೆಗೆ ತಿಳಿಸಿದ್ದಾರೆ.

95 ಕೋಟಿ ಮತದಾರರ ಪೈಕಿ 54 ಕೋಟಿಗಿಂತಲೂ ಅಧಿಕ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಣೆ ಮಾಡಲು ಒಪ್ಪಿದ್ದಾರೆ ಎಂದೂ ಕಿರಣ್ ರಿಜಿಜು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.