ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ಹಾಗೂ ಮೋದಿ ಅವರನ್ನು ಟೀಕಿಸಿದ್ದ ಅಮೆರಿಕದ ಶ್ರೀಮಂತ ಉದ್ಯಮಿ ಜಾರ್ಜ್ ಸೊರೊಸ್ ವಿರುದ್ಧ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಕಿಡಿಕಾರಿದ್ದಾರೆ.

ಐಐಟಿ ಮದ್ರಾಸ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಾವೀನ್ಯತೆ ಕೇಂದ್ರ ಉದ್ಘಾಟಿಸಿ ಮಂಗಳವಾರ ಮಾತನಾಡಿದ ಅವರು ‘ರಾಜಕೀಯದಲ್ಲಿ ಇರುವವರು ಇನ್ನೊಂದು ಬಗೆಯ ರಾಜಕಾರಣದಲ್ಲಿ ತೊಡಗಿರುವವರ ವಿರುದ್ಧ ಹೋರಾಡಬೇಕು. ತರ್ಕಬದ್ಧ ಪ್ರಶ್ನೆಗಳನ್ನು ಎದುರಿಸಬೇಕು’ ಎಂದು ಹೇಳಿದ್ದಾರೆ.

‘2002ರಲ್ಲಿ ಗುಜರಾತ್ನಲ್ಲಿ ನಡೆದಿದ್ದ ಹಿಂಸಾಚಾರದ ಕುರಿತು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿತ್ತು. ಈ ದೇಶದ ಸರ್ವೋಚ್ಛ ನ್ಯಾಯಾಲಯವು ಎರಡು ದಶಕಗಳ ಬಳಿಕ ಈ ಕುರಿತ ತೀರ್ಪು ಪ್ರಕಟಿಸಿತ್ತು. ಹಿಂಸಾಚಾರದಲ್ಲಿ ಗುಜರಾತ್ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪಾತ್ರದ ಕುರಿತು ಬಿಬಿಸಿಯು ತನ್ನ ಸಾಕ್ಷ್ಯಚಿತ್ರದಲ್ಲಿ ಉಲ್ಲೇಖಿಸಿದೆ. ಇದನ್ನು ಕೆಲವರು ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಕರೆದಿದ್ದಾರೆ. ಅಭಿವ್ಯಕ್ತಿಯ ಹೆಸರಿನಲ್ಲಿ ಸುಪ್ರೀಂ ಕೋರ್ಟ್ನ ವಿಶ್ವಾಸಾರ್ಹತೆ ಪ್ರಶ್ನಿಸಬಹುದೆ? ಎರಡು ದಶಕಗಳ ಕಾಲ ನಡೆದ ತನಿಖೆಯನ್ನು ಕಡೆಗಣಿಸಬಹುದೇ? ಇದು ಮತ್ತೊಂದು ಬಗೆಯ ರಾಜಕಾರಣ ಎಂಬುದು ಸ್ಪಷ್ಟ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.