ನೊಯಿಡಾ: ‘ರೀಲ್ಸ್’ ಮಾಡುತ್ತ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಉತ್ತರ ಪ್ರದೇಶದ ನೊಯಿಡಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ನಗರದ ರಸ್ತೆಗಳಲ್ಲಿ ಹೆಲ್ಮೆಟ್ ಧರಿಸದೆ ಹಾಗೂ ಅಜಾಗರೂಕತೆಯಿಂದ ಸ್ಕೂಟರ್ ಚಾಲನೆ ಮಾಡಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ವಿಡಿಯೊ ಅಶ್ಲೀಲವಾಗಿವೆ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ ಬಳಿಕ ಮೂವರನ್ನು ಬಂಧಿಸಲಾಗಿದೆ. ಅಲ್ಲದೇ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸದ ಕಾರಣ ₹80,500 ದಂಡ ವಿಧಿಸಲಾಗಿದೆ.

ಮೂವರ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ. ಜಮುನಾ ಪ್ರಸಾದ್ ಅಲಿಯಾಸ್ ಪಿಯೂಷ್ ಎಂಬ ವ್ಯಕ್ತಿ ಅಜಾಗರೂಕತೆಯಿಂದ ಸ್ಕೂಟರ್ ಚಲಾಯಿಸುತ್ತಿದ್ದರೆ, ವಿನಿತಾ ಮತ್ತು ಪ್ರೀತಿ ಎಂಬ ಮಹಿಳೆಯರು ಅಶ್ಲೀಲವಾಗಿ ವರ್ತಿಸಿದ್ದರು. ವಿನಿತಾ ಎಂಬಾಕೆಯ ಹೆಸರಿನಲ್ಲಿ ಸ್ಕೂಟರ್ ನೊಂದಣಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಸ್ಕೂಟರ್ ಮೇಲೆ ಮಾಡಿದ್ದು 2 ರೀಲ್ಸ್: FIR ಜತೆ ₹80 ಸಾವಿರ ದಂಡ ವಿಧಿಸಿದ ಪೊಲೀಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.