ಮುಂಬೈ:‘ಎನ್ಸಿಬಿಯ ಮುಂಬೈ ವಲಯದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಅವರು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ವಿರುದ್ಧ ಭಾನುವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಸಂಬಂಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಸಮೀರ್ ಅವರು ಸರ್ಕಾರಿ ಹುದ್ದೆ ಪಡೆಯುವುದಕ್ಕಾಗಿ ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು’ ಎಂದು ಮಲಿಕ್ ಆರೋಪಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಮುಂಬೈ ಜಿಲ್ಲಾ ಜಾತಿಪ್ರಮಾಣಪತ್ರ ಪರಿಶೀಲನಾ ಸಮಿತಿಯು ಸಮೀರ್ ಸಲ್ಲಿಸಿರುವ ಪ್ರಮಾಣಪತ್ರ ನಕಲಿಯಲ್ಲ ಎಂದು ಶುಕ್ರವಾರ ಹೇಳಿತ್ತು.

‘ತಾವು ನಿರ್ದೋಷಿ ಎಂಬುದು ಸಾಬೀತಾದ ಬೆನ್ನಲ್ಲೇ ಭಾನುವಾರ ಗೋರೆಗಾಂವ್ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಸಮೀರ್, ಮಲಿಕ್ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.