ನವದೆಹಲಿ: ಸಿಖ್ ಮೂಲಭೂತವಾದಿ, ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ಪಂಜಾಬ್ ಪೊಲೀಸ್ ಮೂಲಗಳ ಪ್ರಕಾರ ಅಮೃತಪಾಲ್ ಸಿಂಗ್ ಅವರನ್ನು ಅಸ್ಸಾಂನ ದಿಬ್ರುಗಢಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದರು. ಅಮೃತಪಾಲ್ ಸಿಂಗ್‌ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಲಂಡನ್‌ಗೆ ತೆರಳಲು ಮುಂದಾಗಿದ್ದ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ಅವರನ್ನು ಅಮೃತಸರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.